CISF Recruitment: 10ನೇ ಪಾಸಾದವರಿಗೆ ಉದ್ಯೋಗಾವಕಾಶ.! ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಜನತೆಗೆ ತಿಳಿಸುವುದೇನೆಂದರೆ 10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಎಂದೇ ಹೇಳಬಹುದು. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಸುಮಾರು 1,124 ಕಾನ್ಸ್ಟೇಬಲ್ ಹಾಗೂ ಡ್ರೈವರ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡಿ.
Also Read: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ.!
ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ (CISF Recruitment)
ಕೇಂದ್ರ ಕೈಗಾರಿಕಾ ಹಾಗೂ ಭದ್ರತಾ ಪಡೆಯು ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ಈ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಮಾರ್ಚ್ ಮೂರನೇ ತಾರೀಕು 2025 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು.!
ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF Recruitment)ಯು ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕೆಂದು ತಿಳಿಸಲಾಗಿದೆ. ಇದರ ಜೊತೆಗೆ ಲಘು ವಾಹನ ಚಾಲನ ಪರವಾನಗಿ ಹಾಗೂ ಬಾರಿ ವಾಹನ ಚಾಲನ ಪರವಾನಗಿ ಹೊಂದಿರಬೇಕು.
ವಯೋಮಿತಿ ವಿವರ:
ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ ಕನಿಷ್ಠ 21 ವರ್ಷ ಮೇಲ್ಪಟ್ಟಿರಬೇಕಾಗುತ್ತದೆ ಹಾಗೂ 27 ವರ್ಷ ದಾಟಿರಬಾರದು.
ಅರ್ಜಿ ಶುಲ್ಕ ಮತ್ತು ಸಂಬಳದ ವಿವರಗಳು:
ಅರ್ಜಿ ಸಲ್ಲಿಸಲು ಬಯಸುವಂತಹ ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100 ರೂಪಾಯಿಯ ಅರ್ಜಿ ಶುಲ್ಕ. ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಮಾಜಿ ಸೈನಿಕ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ನಿಗದಿಪಡಿಸಲಾಗಿಲ್ಲ. ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 21,700 ರಿಂದ ಹಿಡಿದು 69,100 ವರೆಗೆ ಸಂಬಳವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ.?
ಈ ಕೆಳಗೆ ನೀಡಿರುವಂತಹ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ಕಾನ್ಸ್ಟೇಬಲ್ ಹಾಗೂ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ತುಂಬಾ ಸುಲಭವಾಗಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಇದಕ್ಕೆ ಬೇಕಾಗುವಂತಹ ಅಧಿಕೃತ ಜಾಲತಾಣದ ಲಿಂಕನ್ನು ಕೆಳಗಡೆ ನೀಡಲಾಗಿದೆ ನೋಡಿ.
ಮೇಲೆ ಕೊಟ್ಟಿರುವಂತಹ ಜಾಲತಾಣವನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
Also Read: ಮನೆಯಲ್ಲೇ ಪಿವಿಸಿ ಆಧಾರ್ ಕಾರ್ಡ್ ಮಾಡಿಸಿಕೊಳ್ಳಿ, ಅರ್ಜಿ ಸಲ್ಲಿಕೆ ಆರಂಭ.!